ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣ: ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದ ಎನ್ಐಎ.

50
firstsuddi

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಶಬ್ಬೀರ್ ನನ್ನು ವಶಕ್ಕೆ ಪಡೆಯಲಾಗಿದ್ದು, ಈತ ಬಳ್ಳಾರಿಯ ಟ್ಯಾಂಕ್ ಬಂಡ್ ರೋಡ್ ಗಲ್ಲಿ ನಿವಾಸಿಯಾಗಿದ್ದು, ತೋರಣಗಲ್ ನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾನೆ.

ಈತ ಬುಡಾ ಕಾಂಪ್ಲೆಕ್ಸ್ ಬಳಿ ಶಂಕಿತ ಉಗ್ರನನ್ನ ಭೇಟಿಯಾಗಿದ್ದ. ಹಾಗೂ ಶಬ್ಬೀರ್, ಶಂಕಿತನನ್ನು ಫೋನ್ ಮೂಲಕ ಸಂಪರ್ಕ ಮಾಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಎಲ್ಲಾ ಅನುಮಾನದ ಮೇಲೆ ಎನ್ಐಎ ಅಧಿಕಾರಿಗಳು ಶಬ್ಬೀರ್ ನನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬಳ್ಳಾರಿ, ಆಂಧ್ರ ಪ್ರದೇಶ, ಬೆಂಗಳೂರಿನಲ್ಲಿ ಸತತ ತನಿಖೆ ಮುಂದುವರಿಸಿದ್ದಾರೆ.