ರಾಯಗಢದಲ್ಲಿ ಭೀಕರ ಭೂಕುಸಿತ- ನಾಲ್ವರು ಸಾವು, ಹಲವು ಮಂದಿಗೆ ಗಾಯ…

48
firstsuddi

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಬುಡಕಟ್ಟು ಸಮುದಾಯದ 30ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿ ವಾಸಿಸುತ್ತಿವೆ ಎಂದು ತಿಳಿದು ಬಂದಿದೆ. ಸುಮಾರು 17 ಮನೆಗಳಿಗೆ ಹಾನಿಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಎಂಎ) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಯಗಢ ಸ್ಥಳೀಯಾಡಳಿತ ಮತ್ತು ಪೊಲೀಸ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಮಹಾರಾಷ್ಟ್ರ ಪರ್ವತಾರೋಹಿಗಳ ತಂಡವನ್ನು (ಎಂಎಂಆರ್‌ಸಿಸಿ) ಸ್ಥಳಕ್ಕೆ ರವಾನಿಸಲಾಗಿದೆ. ಇದುವರೆಗೆ 22 ಜನರನ್ನು ರಕ್ಷಿಸಿದ್ದು, ಇನ್ನೂ ಹಲವು ಮಂದಿ ಅವಶೇಷಗಳೊಳಗೆ ಸಿಕ್ಕಿಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿದ್ದು. ಇದರ ಜತೆಗೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕೂಡ ರಾಯಗಢದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲನೆ ನಡೆಸಿದ್ದಾರೆ.