ರಾಯಚೂರಿನಲ್ಲಿ ಎರಡು ಪೋಕ್ಸೊ ಕೇಸ್ ದಾಖಲು – ಇಬ್ಬರು ಕಾಮುಕರ ಬಂಧನ…

81
firstsuddi

ರಾಯಚೂರು : ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಎರಡು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸದ್ಯ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಸಿರವಾರ ತಾಲೂಕಿನ ಮಾಚನೂರು ಗ್ರಾಮದಲ್ಲಿ 13 ವರ್ಷದ ವಿದ್ಯಾರ್ಥಿಯನ್ನು ಅತಿಥಿ ಶಿಕ್ಷಕ ಪಾಲೇಶ್ (32) ಕರೆದುಕೊಂಡು ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೂರು ದಿನಗಳ ನಂತರ ಅತಿಥಿ ಶಿಕ್ಷಕ ಹಾಗೂ ವಿದ್ಯಾರ್ಥಿನಿ ಪತ್ತೆಯಾಗಿದ್ದು, ಪೋಷಕರಿಗೆ ಬಾಲಕಿಯನ್ನು ಪೊಲೀಸರು ಒಪ್ಪಿಸಿದ್ದಾರೆ. ಇತ್ತ ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ದೇವದುರ್ಗ ತಾಲೂಕಿನಲ್ಲಿ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮಗುವನ್ನು ಮನೆಗೆ ಬಿಡುವ ನೆಪದಲ್ಲಿ ಕರೆದೊಯ್ದ ಕಾಮುಕ ಅತ್ಯಾಚಾರಕ್ಕೆ ಯತ್ನಿಸಿದ್ದ, ಮಗು ಕೂಗಾಡಿ ಗಲಾಟೆ ಮಾಡಿದಾಗ ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದ. ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಜಾಲಹಳ್ಳಿ ಪೊಲೀಸರು ಆರೋಪಿ ಅಯ್ಯಪ್ಪ (45)ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.