ರಾಯಚೂರು : ಕಾಣೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆ!

96
Firstsuddi

ರಾಯಚೂರು : ಕಾಣೆಯಾಗಿದ್ದ ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಬಲ್ಲಟಗಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಮಕ್ಕಳಿಬ್ಬರ ಶವ ಪತ್ತೆಯಾಗಿದ್ದು,. ವರುಣ(9) ಹಾಗೂ ಸಣ್ಣಯ್ಯ(5) ಮೃತಪಟ್ಟ ಬಾಲಕರಾಗಿದ್ದಾರೆ.

ನಿನ್ನೆ ಮಧ್ಯಾಹ್ನ ಮನೆಯ ಹೊರಗಡೆ ಆಟವಾಡುತ್ತಿದ್ದ ಬಾಲಕರು ಏಕಾಏಕಿ ನಾಪತ್ತೆಯಾಗಿದ್ದರು , ಹೀಗಾಗಿ ಕುಟುಂಬಸ್ಥರು ಗ್ರಾಮದಲ್ಲಿ ಎಲ್ಲಾ ಕಡೆ ಹುಡಕಾಟ ನಡೆಸಿದ್ದರೂ ಬಾಲಕರಿಬ್ಬರು ಪತ್ತೆಯಾಗಿರಲಿಲ್ಲ. ಆದರೆ ಇದೀಗ ಗ್ರಾಮದ ಹಳ್ಳದಲ್ಲೇ ಇಂದು ಬೆಳಗ್ಗೆ ಶವಗಳು ಪತ್ತೆಯಾಗಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸಿರವಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.