ರಾಯಚೂರು ಪ್ರವೇಶಿಸಿದ ಭಾರತ್ ಜೋಡೋ – ರಾಹುಲ್ ಗಾಂಧಿಗೆ ಅದ್ದೂರಿ ಸ್ವಾಗತ…

64
firstsuddi

ರಾಯಚೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಯಚೂರು ಜಿಲ್ಲೆ ಪ್ರವೇಶಿಸಿದೆ. ರಾಯರ ದರ್ಶನ ಮುಗಿಸಿ ರಾಯಚೂರು ಪ್ರವೇಶ ಮಾಡಿದ ರಾಹುಲ್ ಗಾಂಧಿಗೆ ರಾಯಚೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ.

ಪಾದಯಾತ್ರೆ ಆಂಧ್ರಪ್ರದೇಶದಿಂದ ರಾಯಚೂರು ತಾಲೂಕಿನ ತುಂಗಭದ್ರಾ ಸೇತುವೆ ಮೂಲಕ ಜಿಲ್ಲೆಗೆ ಆಗಮಿಸಿದ್ದು, ಜಿಲ್ಲಾ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ, ಸಲೀಂ ಅಹ್ಮದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಜಿಲ್ಲೆಯ ಗಿಲ್ಲೆಸೂಗೂರುವರೆಗೆ ಪಾದಯಾತ್ರೆ ನಡೆಸಿ ಬಳಿಕ ಸ್ವಲ್ಪ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಯಾತ್ರೆ ಆರಂಭಿಸಿ ಯರಗೇರಾವರೆಗೆ ತಲುಪಲಿದೆ. ಯರಗೇರಾ ಗ್ರಾಮದಲ್ಲಿ ಕಾರ್ನರ್ ಮೀಟಿಂಗ್ ನಡೆಯಲಿದ್ದು, ಸಾರ್ವಜನಿಕರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಕಾರ್ಯಕ್ರಮ ಬಳಿಕ ಯರಗೇರಾ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.