ಹಾವೇರಿ : ಸೇನಾ ಮುಖಂಡ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಜಿಲ್ಲೆಯ ಶಿಗ್ಗಾಂವಿಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾವಣೆ ನಂತರ ಮಾತನಾಡಿದ ಅವರು, ಇಡೀ ದೇಶವೇ ರಾವತ್ ಅವರ ಸಾವಿಗೆ ಕಂಬನಿ ಮಿಡಿದಿದೆ. ಆದರೆ ಕೆಲವರು ಅವರ ಸಾವನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನು ಹಾಕಿರುವುದು ತೀವ್ರ ಖಂಡನೀಯ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಿನ್ನೆ ಏರ್ ಫೋರ್ಸ್ ಕಮಾಂಡೋ ಆಸ್ಪತ್ರೆಗೆ ಭೇಟಿ ನೀಡಿ ಗ್ರೂಪ್ ಕ್ಯಾಪ್ಟನ್ ವರುಣ ಪ್ರತಾಪ ಸಿಂಗ್ ಬಗ್ಗೆ ಮಾಹಿತಿ ಪಡೆದುಕೊಂಡು ಬಂದಿದ್ದೇನೆ. ಅಲ್ಲಿ ಉತ್ತಮ ವೈದ್ಯರ ತಂಡವಿದೆ ಎಂದು ತಿಳಿಸಿದರು.










