ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ…

54
firstsuddi

ನವದೆಹಲಿ : ಬಿಜೆಪಿ ನೇತೃತ್ವದ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಿದರು.

ದ್ರೌಪದಿ ಮುರ್ಮು ಇಂದು 12 ಗಂಟೆಗೆ ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್ ಜಿಲ್ಲೆಯವರಾಗಿದ್ದು, ಬುಡಕಟ್ಟು ಜನಾಂಗ ಮೂಲದ ಮಹಿಳೆ. 2015-21ರ ಅವಧಿಯಲ್ಲಿ ಜಾರ್ಖಂಡ್ ನ ರಾಜ್ಯಪಾಲರಾಗಿದ್ದರು. ಇದೀಗ 16ನೇ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಮತ್ತು ದ್ರೌಪದಿ ಮುರ್ಮು ನಡುವೆ ರಾಷ್ಟ್ರಪತಿ ಹುದ್ದೆಗಾಗಿ ಪೈಪೋಟಿ ನಡೆಯಲಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.