ರಾಷ್ಟ್ರವ್ಯಾಪಿ ಲಾಕ್ ಡೌನ್ ಮಾಡುವ ಯೋಜನೆ ಇಲ್ಲ : ನಿರ್ಮಲಾ ಸೀತಾರಾಮನ್.

155
firstsuddi

ನವದೆಹಲಿ : ರಾಷ್ಟ್ರವ್ಯಾಪಿ ಲಾಕ್ ಡೌನ್ ಮಾಡುವ ಯೋಜನೆ ಇಲ್ಲ. ಅದರ ಬದಲಾಗಿ ಸೋಂಕು ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಸಣ್ಣ ಕಂಟೈನ್ಮೆಂಟ್ ಝೋನ್ ಗಳನ್ನಾಗಿ ಗುರುತಿಸಲಾಗುತ್ತದೆ. ಅಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಕೊರೊನಾ ದಿನೇ ದಿನೇ ಹೆಚ್ಚುತ್ತಿರುವ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್ ಅವರು ಸೂಕ್ಷ್ಮ, ಸಣ್ಣ ಮಧ್ಯ ಉದ್ದಿಮೆಗಳ(ಎಫ್ಐಎಸ್ಎಮ್ಈ) ಅಧ್ಯಕ್ಷ ಅನಿಮೇಶ್ ಸಕ್ಸೇನಾರೊಂದಿಗೆ ಮಾತಕತೆ ನಡೆಸಿದ್ದಾರೆ. ದೇಶದ್ಯಂತ ಮತ್ತೆ ಲಾಕ್ ಡೌನ್ ಮಾಡುವ ಯೋಜನೆ ಇಲ್ಲ ಎಂದು ಉದ್ಯಮ ಕ್ಷೇತ್ರಕ್ಕೆ ಭರವಸೆ ನೀಡಿದ್ದಾರೆ. ಇನ್ನೂ ನಿರ್ಮಲಾ ಸೀತಾರಾಮನ್ ಅವರು ತಮ್ಮೊಂದಿಗೆ ಮಾತನಾಡಿರುವ ಬಗ್ಗೆ ಮಾಹಿತಿ ನೀಡಿರುವ ಅನಿಮೇಶ್ ಸಕ್ಸೇನಾರವರು ಪ್ರಧಾನ ಮತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಎಲ್ಲಾ ಅಧಿಕಾರಿಗಳು, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಆಕ್ಸಿಜನ್ ಹಾಗೂ ಇತರ ಸೌಕರ್ಯಗಳಿಗೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದಿದ್ದಾರೆ.