ರಾಷ್ಟ್ರೀಯ ಏಕತಾ ದಿನ : ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಮೋದಿ…

197
firstsuddi

ಗುಜರಾತ್ : ಇಂದು ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‍ನ ಕೆವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಇಂದು ದೇಶದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಗಿದ್ದು, ಈ ದಿನವನ್ನು ಪ್ರತಿವರ್ಷ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವುದಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ಜಾರಿಗೆ ತಂದಿತು. ಅದರಂತೆ ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 145ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಕತಾ ಪ್ರತಿಮೆಗೆ ಜಲಾರ್ಚನೆ ಹಾಗೂ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ರಾಷ್ಟ್ರೀಯ ಏಕತಾ ದಿವಸ್ ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ಸ್ವೀಕರಿಸಿದರು.