ನೇರಲಕೆರೆ ಬಾಲಕಿಯರ ವಸತಿ ನಿಲಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ

70
firstsuddi

ತರಿಕೆರೆ: ತಾಲೂಕಿನ ನೇರಲಕೆರೆ ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರು ಆಯೋಜಿಸಿದ ಕಾರ್ಯಕ್ರಮದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹೆಣ್ಣು ಮಕ್ಕಳ ಆರೋಗ್ಯ, ಶಿಸ್ತು, ಸಂಸ್ಕಾರ, ಬಾಲ್ಯ ವಿವಾಹ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಋತುಚಕ್ರದ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೃಪ ಭಾರದ್ವಾಜ್ ʼಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಎಲ್ಲ ಹೆಣ್ಣುಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು. ಬಾಲ್ಯ ವಿವಾಹಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಕಾಯಿದೆ ಪ್ರಕಾರ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವ ಮೊದಲೇ ಬಾಲ್ಯ ವಿವಾಹ ಮಾಡಿದರೆ ಪೋಷಕರಿಗೆ 2 ವರ್ಷಗಳ ಕಠಿಣ ಜೈಲುವಾಸ, 1 ಲಕ್ಷ ದಂಡ ಇದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವದು ನಮ್ಮೆಲ್ಲರ ಕರ್ತವ್ಯ’ ಎಂದರು.

ಕಾರ್ಯಕ್ರಮದಲ್ಲಿ ಕಸ್ತೂರಬಾ ಗಾಂಧಿ ವಸತಿ ನಿಲಯ ಮೇಲ್ವಿಚಾರಕರಾದ ಅಕ್ಷತಾ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾದ ಅಕ್ಷತ ಎಂ, ಅಕ್ಷತ ಹಿರೇಮಠ್, ಪ್ರಿಯಾಂಕ ಎಂ ಆರ್, ಹಿತಶ್ರೀ ಬಿ ಎಂ, ಸುಜನ, ದೀಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.