ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಮಾಸಿಕ, ವಾರ್ಷಿಕ ಟೋಲ್ ಪಾಸ್: ನಿತಿನ್ ಗಡ್ಕರಿ.

39

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್‌ಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಪಾಸ್‍ಗಳನ್ನು ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಅವರು, ಖಾಸಗಿ ವಾಹನಗಳು ಒಟ್ಟು ಟೋಲ್ ಸಂಗ್ರಹದಲ್ಲಿ ಕೇವಲ ಶೇಕಡ 26 ರಷ್ಟಿವೆ ಎಂದು ತಿಳಿಸಿದ್ದಾರೆ. ಗ್ರಾಮಸ್ಥರ ಸಂಚಾರಕ್ಕೆ ತೊಂದರೆಯಾಗದಂತೆ ಹಳ್ಳಿಗಳ ಹೊರಗೆ ಟೋಲ್ ಸಂಗ್ರಹಣಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ವರದಿ ನೀಡಿದ್ದಾರೆ. ಟೋಲ್ ಆದಾಯದ ಶೇಕಡ 74 ರಷ್ಟು ವಾಣಿಜ್ಯ ವಾಹನಗಳಿಂದ ಬರುತ್ತದೆ. ಖಾಸಗಿ ವಾಹನಗಳಿಗೆ ಮಾಸಿಕ ಅಥವಾ ವಾರ್ಷಿಕ ಪಾಸ್‍ಗಳನ್ನು ಪರಿಚಯಿಸುವ ಕುರಿತು ನಾವು ಪರಿಗಣಿಸುತ್ತಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಒಟ್ಟು ಟೋಲ್ ಸಂಗ್ರಹದಲ್ಲಿ ಖಾಸಗಿ ವಾಹನಗಳು ಕೇವಲ ಶೇಕಡ 26 ರಷ್ಟಿದ್ದು, ಸರ್ಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಹೆಚ್ಚುವರಿ ಸೌಲಭ್ಯವಾಗಿ ಜಾರಿಗೆ ತರಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.