ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ.

50
firstsuddi

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯನವರು ನಿನ್ನೆ ನಗರದ ಒರಾಯನ್ ಮಾಲ್ ನಲ್ಲಿ ಕನ್ನಡದ ‘ಡೊಳ್ಳು’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ ಸಿನಿಮಾ ಮಾಡಿದ್ದಾರೆ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು.

ಡೊಳ್ಳು ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿರುವುದು ವಿಶೇಷ. ಅಲ್ಲದೇ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಮನ್ನಣೆ ಪಡೆದುಕೊಂಡಿದೆ. ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.