ರಾಸಲೀಲೆ ಸಿಡಿ ಪ್ರಕರಣ – ಇಂದೂ ವಿಚಾರಣೆಗೆ ಹಾಜರಾಗುತ್ತಿಲ್ಲ ಮಾಜಿ ಸಚಿವ..!

103
Firstsuddi

ಬೆಳಗಾವಿ : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ರಮೇಶ್ ಜಾರಕಿಹೊಳಿ ಅವರಿಗೆ ಏಪ್ರಿಲ್ 1ರಂದು ಕೋವಿಡ್ ಸೋಂಕು ಧೃಡಪಟ್ಟಿತ್ತು. ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 4ರಂದು ಗೋಕಾಕ್ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಾರಕಿಹೊಳಿಯವರು ಏಪ್ರಿಲ್ 7ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಇದೀಗ ಕೊರೊನಾ ನೆಗೆಟಿವ್ ಬಂದರೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಇನ್ನೂ ಒಂದು ವಾರ ಎಲ್ಲೂ ಹೋಗದೇ ವಿಶ್ರಾಂತಿ ಮಾಡುವಂತೆ ಗೋಕಾಕ್ ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಸಲಹೆ ನೀಡಿದ್ದಾರೆ. ಈ ಹಿನ್ನೆಲೆ ರಮೇಶ್ ಜಾರಕಿಹೊಳಿ ಅವರು ಗೋಕಾಕ್ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಗೋಕಾಕ್ ಗೆ ಆಗಮಿಸಿದ್ದ ಎಸ್ಐಟಿ ಅಧಿಕಾರಿಗಳು ಏಪ್ರಿಲ್ 20ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.