ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ನಾಲ್ವರು ಸಾವು…

176
Firstsuddi

ರತ್ನಗಿರಿ (ಮಹಾರಾಷ್ಟ್ರ) : ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಘರ್ಡಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ.

ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಈ ವೇಳೆ ಕಾರ್ಖಾನೆಯೊಳಗೆ ಸಿಲುಕಿದ್ದ ಕಾರ್ಮಿಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಆದರೆ ನಾಲ್ವರು ಮೃತಪಟ್ಟಿದ್ದು, ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಕಾರ್ಮಿಕನನ್ನು ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿ ಅವಘಡದ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ. ತನಿಖೆ ಮುಂದುವರೆದಿದೆ. ಘಟನೆ ಸಂಬಂಧ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಾಗಿದೆ.