ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ನಿನ್ನೆ 10 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಇಡಿ ನೋಟಿಸ್ ಹಿನ್ನೆಲೆಯಲ್ಲಿ ನಿನ್ನೆ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ರಾಹುಲ್ ಗಾಂಧಿ ಉತ್ತರದಿಂದ ಸಮಾಧಾನ ಆಗದ ಇಡಿ ಅಧಿಕಾರಿಗಳು ಇಂದು ದಾಖಲೆಗಳ ಸಹಿತ ವಿಚಾರಣೆಗೆ ಬನ್ನಿ ಎಂದು ಸೂಚನೆ ನೀಡಿದ್ದಾರೆ. ವಿಚಾರಣೆ ಪೂರ್ಣಗೊಂಡ ಬಳಿಕ ರಾಹುಲ್ ಗಾಂಧಿಯವರನ್ನು ಬಂಧಿಸುವ ಸಾಧ್ಯತೆಗಳಿವೆ.










