ರಾಹುಲ್ ಗಾಂಧಿ ವಿದೇಶ ಪ್ರವಾಸ ; ಬಿಜೆಪಿ ವದಂತಿ ಹಬ್ಬಿಸಬಾರದು : ಸುರ್ಜೇವಾಲ.

81
firstsuddi

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಟಲಿ ಪ್ರವಾಸಕ್ಕೆ ತೆರಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ರಾಹುಲ್ ಗಾಂಧಿ ಅವರು ಅಲ್ಪಾವಧಿಗೆ ವೈಯಕ್ತಿಕ ವಿದೇಶ ಪ್ರವಾಸ ಕೈಗೊಂಡಿದ್ದು, ಇಟಲಿಗೆ ತೆರಳಿದ್ದಾರೆ. ಈ ಬಗ್ಗೆ ಬಿಜೆಪಿ ಅನಗತ್ಯವಾಗಿ ವದಂತಿ ಹಬ್ಬಿಸುವುದು ಬೇಡ ಎಂದಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳ ಚುನಾವಣೆ ಜನವರಿ ಮಧ್ಯದ ವೇಳೆಗೆ ಘೋಷಣೆಯಾಗುವ ನಿರೀಕ್ಷೆಯಿದೆ. ರಾಹುಲ್ ಗಾಂಧಿ ಪಂಜಾಬ್ ನ ಮೋಗಾ ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಸಮಾವೇಶವನ್ನು ಜನವರಿ 3 ರಂದು ಉದ್ಘಾಟಿಸಿಬೇಕಿತ್ತು. ಆದರೆ ಇದೀಗ ಮುಂದೂಡುವ ಸಾಧ್ಯತೆಗಳಿವೆ.