ರಾಹುಲ್ ತುಂಬಾ ಒಳ್ಳೆಯ ವ್ಯಕ್ತಿ, ಆದರೆ ರಾಜಕೀಯಕ್ಕೆ ಬೇಕಾದ ಸಾಮರ್ಥ್ಯ ಅವರಲ್ಲಿ ಇಲ್ಲ : ಆಜಾದ್.

53
firstsuddi

ನವದೆಹಲಿ: ರಾಹುಲ್ ಗಾಂಧಿ ಅವರು ತುಂಬಾ ಒಳ್ಳೆಯ ಮನುಷ್ಯ. ಆದರೆ ರಾಜಕೀಯಕ್ಕೆ ಬೇಕಾದ ಸಾಮರ್ಥ್ಯ ಅವರಲ್ಲಿ ಇಲ್ಲ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಹೇಳಿದರು.

ಸೋನಿಯಾ ಗಾಂಧಿ ಮತ್ತು ಗಾಂಧಿ ಕುಟುಂಬದ ಸದಸ್ಯರ ಬಗ್ಗೆ ನನಗೆ ಅಪಾರ ಗೌರವವಿದೆ. ರಾಹುಲ್ ಗಾಂಧಿ ಅವರನ್ನು ಯಶಸ್ವಿ ನಾಯಕರನ್ನಾಗಿ ಮಾಡಲು ಕಾಂಗ್ರೆಸ್ನ ಎಲ್ಲಾ ನಾಯಕರೂ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರೇ ಆಸಕ್ತಿ ತೋರಿಸಲಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಅರ್ಥಹೀನವಾಗಿದೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಅವರ ಕಾಲದಲ್ಲಿ ನಡೆಯುತ್ತಿದ್ದ ಸಮಾಲೋಚನಾ ಪ್ರಕ್ರಿಯೆ ಈಗ ಅಲ್ಲಿ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.