ರಾಹುಲ್ ದ್ರಾವಿಡ್​ಗೆ ಕೊರೊನಾ ದೃಢ : ಬಿಸಿಸಿಐ ಮಾಹಿತಿ…

88
firstsuddi

ನವದೆಹಲಿ : ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್​ಗೆ ಕೋವಿಡ್ ದೃಢಪಟ್ಟಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

2022ರ ಏಷ್ಯಾ ಕಪ್ ಗಾಗಿ ಯುಎಇಗೆ ತೆರಳುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ತಂಡದ ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ದ್ರಾವಿಡ್​ಗೆ ಕೊರೊನಾ ಪಾಸಿಟಿವ್ ಬಂದಿದೆ. ದ್ರಾವಿಡ್ ಗೆ ಸೋಂಕಿನ ರೋಗ ಲಕ್ಷಣವು ಸೌಮ್ಯ ರೋಗಲಕ್ಷಣಗಳಿದೆ. ಈ ಹಿನ್ನೆಲೆಯಲ್ಲಿ ಆ.27ರಿಂದ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಕೊರೊನಾ ನೆಗೆಟಿವ್ ಬಂದ ನಂತರದಲ್ಲಿ ಮತ್ತೆ ತಂಡಕ್ಕೆ ಸೇರುವ ಸಾಧ್ಯತೆಯಿದೆ ಎಂದು ಬಿಸಿಸಿಐ ತಿಳಿಸಿದೆ. ಆಗಸ್ಟ್ 28 ರಂದು ಏಷ್ಯಾ ಕಪ್ ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಮೊದಲ ಪಂದ್ಯ ಆಡಲಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಯಲ್ಲಿ ದ್ರಾವಿಡ್ ಇರಲಿಲ್ಲ. ಕೆ ಎಲ್ ರಾಹುಲ್ ನೇತೃತ್ವದ ತಂಡವು 3-0 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.