ರಿಯಲ್‍ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ವಾರ್ನರ್ ಟೈಲರ್ ರಿಲೀಸ್.

32

ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ವಾರ್ನರ್ ಟ್ರೈಲರ್ ರಿಲೀಸ್ ಆಗಿದೆ. ಉಪೇಂದ್ರ ಸಿನಿಮಾಗಾಗಿ ಎದುರು ನೋಡುತ್ತಿದ್ದ ಫ್ಯಾನ್ಸ್‍ಗೆ ಗುಡ್ ನ್ಯೂಸ್ ಸಿಕ್ಕಿದೆ. ಉಪ್ಪಿ ಟ್ರೈಲರ್‌ನಲ್ಲಿ ಡಿಫರೆಂಟ್ ಗೆಟಪ್ ಮತ್ತು ಕಾನ್ಸೆಪ್ಟ್‍ನಲ್ಲಿ ಮಿಂಚಿದ್ದಾರೆ. UI ಮ್ಯಾಜಿಕ್, ಟ್ರೈಲರ್‍ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ ಟ್ರೈಲರ್ ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‍ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‍ಗೆ ಕೌತುಕ ಮೂಡುವಂತೆ ಮಾಡಿದ್ದಾರೆ. ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿಸೆಂಬರ್ 20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.