ರಿಲಯನ್ಸ್ ಆಸ್ಪತ್ರೆ ಸ್ಫೋಟಿಸುವುದಾಗಿ ಮುಖೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ…

61
firstsuddi

ಮುಂಬೈ : ಮುಂಬೈನಲ್ಲಿರುವ ಸರ್ ಹೆಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಸ್ಫೋಟಿಸುವುದಾಗಿ ಆಸ್ಪತ್ರೆಯ ಲ್ಯಾಂಡ್ ಲೈನ್ ನಂಬರ್ ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

ಇಂದು ಮಧ್ಯಾಹ್ನ 12.57ರ ಸುಮಾರಿಗೆ ಬೆದರಿಕೆ ಕರೆ ಬಂದಿದ್ದು, ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಸ್ಫೋಟಿಸುವುದಾಗಿ ಹಾಗೂ ಮುಖೇಶ್ ಅಂಬಾನಿ, ನೀತಾ ಅಂಬಾನಿ ಮತ್ತು ಕುಟುಂಬದ ಕೆಲ ಸದಸ್ಯರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಕಳೆದ ಆಗಸ್ಟ್ ನಲ್ಲೂ ಹೆಚ್ ಎನ್ ರಿಲಯನ್ಸ್ ಆಸ್ಪತ್ರೆಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ಬಳಿಕ ಕರೆ ಮಾಡಿದ್ದವರನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದರು.