ರಿಷಬ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿ…

58
firstsuddi

ನಟ, ನಿರ್ದೇಶಕನಾಗಿ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿರುವ ಪ್ಯಾನ್ ಇಂಡಿಯಾ ಸ್ಟಾರ್ ರಿಷಬ್ ಶೆಟ್ಟಿ ಅವರು `ಕಾಂತಾರ’ ಸಿನಿಮಾ ನಟಿಸಿ, ನಿರ್ದೇಶಿಸಿ ಇಡೀ ವಿಶ್ವ ಮಟ್ಟದಲ್ಲಿ ಗಮನ ಸೆಳೆದರು. ಇದೀಗ ಕಾಂತಾರ ಸಿನಿಮಾದ ನಟನೆಗಾಗಿ(ಹಿಂದಿ) ರಿಷಬ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿ ದೊರೆತಿದೆ. ನಿನ್ನೆ ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಪ್ರಶಸ್ತಿ ಸ್ವೀಕರಿಸಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿಯನ್ನು ರಿಷಬ್ ಶೆಟ್ಟಿ ದೈವ ನರ್ತಕರು, ಕಾಂತಾರ ತಂಡ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಿನ್ನೆ ವಿಧಿವಶರಾದ ಕನ್ನಡದ ಮೇರು ನಿರ್ದೇಶಕ ಎಸ್.ಕೆ.ಭಗವಾನ್ ಅವರಿಗೆ ಅರ್ಪಿಸಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಸಂತಸವನ್ನು ಹಂಚಿಕೊಂಡಿರುವ ರಿಷಬ್ ಶೆಟ್ಟಿ, ಈ ಪ್ರೀತಿ ಪುರಸ್ಕಾರಕ್ಕೆ ನಾನು ಸದಾ ಚಿರಋಣಿ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿರುವುದು ನನಗೆ ಇನ್ನಷ್ಟು ಸಿನಿಮಾ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸಿದೆ. ನನ್ನನ್ನು ನಂಬಿ ಅವಕಾಶ ಕೊಟ್ಟ ಹೊಂಬಾಳೆ ಸಂಸ್ಥೆ ಮತ್ತು ವಿಜಯ್ ಕಿರಗಂದೂರು ಸರ್ ಅವರಿಗೆ ಋಣಿಯಾಗಿರುವೆ. ನಿಮ್ಮ ಜೊತೆ ಕೈ ಜೋಡಿಸಿ ಹೆಚ್ಚು ಸಿನಿಮಾ ಮಾಡಲು ಕಾಯುತ್ತಿರುವೆ ಎಂದು ಹೇಳಿದ್ದಾರೆ.