ರಿಷಿ ಸುನಕ್​ರನ್ನು ಬ್ರಿಟನ್ ಪ್ರಧಾನಿಯಾಗಿ ನೇಮಿಸಿದ 3ನೇ ಕಿಂಗ್ ಚಾರ್ಲ್ಸ್‌.

38
firstsuddi

ಲಂಡನ್ : ರಿಷಿ ಸುನಾಕ್ ಅವರನ್ನು ಬ್ರಿಟನ್ ಪ್ರಧಾನಿಯಾಗಿ 3ನೇ ಕಿಂಗ್ ಚಾರ್ಲ್ಸ್‌ ಅವರು ಇಂದು ನೇಮಕ ಮಾಡಿದ್ದಾರೆ. ಇದೀಗ ಸುನಕ್ ಮೊದಲ ಬಾರಿಗೆ ಓರ್ವ ಭಾರತೀಯ ಮೂಲದ ವ್ಯಕ್ತಿ ಬ್ರಿಟನ್ ಪ್ರಧಾನಿಯಾಗಿದ್ದು ಮಾತ್ರವಲ್ಲದೆ, 200 ವರ್ಷಗಳಲ್ಲಿ ಅತ್ಯಂತ ಕಿರಿಯ ಪ್ರಧಾನಿ ಎನಿಸಿಕೊಂಡಿದ್ದಾರೆ.

ಬ್ರಿಟನ್ ಪ್ರಧಾನಿಯಾಗಿ ನೇಮಕಗೊಂಡ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಸುನಕ್, ನಮ್ಮ ದೇಶವು ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಉಕ್ರೇನ್ ಮೇಲೆ ಪುಟಿನ್ ಯುದ್ಧ ಸಾರಿದ್ದರಿಂದ, ವಿಶ್ವದಾದ್ಯಂತ ಮಾರುಕಟ್ಟೆಗಳನ್ನು ಅಸ್ಥಿರವಾಗಿದೆ. ಲಿಜ್ ಟ್ರಸ್ ಅವರು ಈ ದೇಶದ ಆರ್ಥಿಕ ಗುರಿಗಳಿಗಾಗಿ ಕೆಲಸ ಮಾಡುವುದು ತಪ್ಪಲ್ಲ, ನಾನು ಅವರ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಕೆಲವು ತಪ್ಪುಗಳನ್ನು ಮಾಡಲಾಗಿದೆ. ನನ್ನ ಮಾತಿನಲ್ಲಿ ಯಾವದೇ ತಪ್ಪು ಉದ್ದೇಶವಿಲ್ಲ. ವಾಸ್ತವದಲ್ಲಿ ಸದುದ್ದೇಶದಿಂದ ಹೇಳುತ್ತಿದ್ದೇನೆ ಎಂದರು.

ಅಕ್ಟೋಬರ್ 24ರಂದು ನಡೆದ ಬ್ರಿಟನ್ ಪ್ರಧಾನಿ ಆಯ್ಕೆಯಲ್ಲಿ ಕನ್ಸರ್ವೇಟೀವ್ ಪಕ್ಷದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಲಿಜ್ ಟ್ರಸ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಪ್ರಧಾನಿ ಯಾರು ಎನ್ನುವ ಚರ್ಚೆ ಶುರುವಾಗಿತ್ತು. ಇದೀಗ ರಿಷಿ ಸುನಕ್ ಬ್ರಿಟನ್ ನ ನೂತನ ಪ್ರಧಾನಿಯಾಗಿದ್ದಾರೆ.