ಬೆಂಗಳೂರು: ಅಭಿಷೇಕ್ ಹಾಗೂ ಅವಿವಾ ಅವರು 2023ರಲ್ಲಿ ವಿವಾಹ ಆದರು. ಇವರ ಮದುವೆ ಅದ್ದೂರಿಯಾಗಿ ನಡೆದಿತ್ತು. ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಖುಷಿ ಮನೆ ಮಾಡಿದೆ. ಅಭಿಷೇಕ್ ಪತ್ನಿ ಅವಿವಾ ಬಿದಪ್ಪ ಅವರು ಇಂದು ಗಂಡುಮಗುವಿಗೆ ಜನ್ಮನೀಡಿದ್ದಾರೆ. ಮಗುವಿನ ಜೊತೆ ಸುಮಲತಾ ಅಂಬರೀಷ್ ಅವರು ಪೋಸ್ ಕೊಟ್ಟಿದ್ದಾರೆ. ಈ ಫೋಟೋ ವೈರಲ್ ಆಗಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಇತ್ತೀಚೆಗೆ ಅವಿವಾ ಅವರ ಸೀಮಂತ ಕಾರ್ಯಕ್ರಮ ನೆರವೇರಿತ್ತು. ಸೀಮಂತ ಕಾರ್ಯಕ್ರಮದಲ್ಲಿ ಚಿತ್ರರಂಗದ ಕೆಲವು ಗಣ್ಯರು ಆಗಮಿಸಿದ್ದರು. ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಅನೇಕರು ಬಂದು ಅವಿವಾ ಅವರನ್ನು ಹರಸಿದ್ದರು. ಅವಿವಾ ಬಿದಪ್ಪ ಅವರು, ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದಪ್ಪ ಅವರ ಪುತ್ರಿ. ಸ್ವತಃ ಫ್ಯಾಷನ್ ಡಿಸೈನರ್ ಆಗಿರುವ ಅವಿವಾ ಬಿದಪ್ಪ ಮಾಡೆಲಿಂಗ್‍ನಲ್ಲಿಯೂ ಆಸಕ್ತಿ ಹೊಂದಿದ್ದಾರೆ.










