ರೇಖಾ ಕದಿರೇಶ್ ಕೊಲೆ : ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ…

73
firstsuddi

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಪೀಟರ್ ಹಾಗೂ ಸೂರ್ಯ ಬಂಧಿತ ಆರೋಪಿಗಳು. ಅರೆಸ್ಟ್ ಮಾಡುವ ಸಂದರ್ಭದಲ್ಲಿ ಪೊಲೀಸರ ಮೇಲೆ ಪೀಟರ್ ಮತ್ತು ಸೂರ್ಯ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅತ್ಮರಕ್ಷಣೆಗಾಗಿ ಉಪ್ಪಾರಪೇಟೆ ಇನ್ಸ್ ಪೆಕ್ಟರ್ ಶಿವಸ್ವಾಮಿ ಮತ್ತು ಕಾಟನ್ ಪೇಟೆ ಇನ್ಸ್ ಪೆಕ್ಟರ್ ಚಿದಾನಂದ್ ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ಆರೋಪಿಗಳ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಹಳಷ್ಟು ಶ್ರಮವಹಿಸಿ ನಮ್ಮ ಪೊಲೀಸರು ಆರೋಪಿಗಳನ್ನು ಹುಡುಕಾಡಿದ್ದರು. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿತ್ತು. ಇವತ್ತು ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಆರೋಪಿಗಳು ಇರುವ ಸುಳಿವು ಸಿಕ್ಕಿತ್ತು. ಪೊಲೀಸರು ಬಂಧಿಸಲು ತೆರಳಿದ್ದಾಗ ಆರೋಪಿಗಳು ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ತಿಳಿಸಿದ್ದಾರೆ.