ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಹತ್ಯೆ ಪ್ರಕರಣ ಸಂಬಂಧ ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಕೊಲೆಗೆ ಸಹಾಯ ಮಾಡಿದ ಆರೋಪದಡಿ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೂ ಪ್ರಮುಖ ಆರೋಪಿಗಳು ಎನ್ನಲಾದ ಪೀಟರ್ ಹಾಗೂ ಸೂರ್ಯ ಎಂಬುವವರು ತಲೆಮರೆಸಿಕೊಂಡಿದ್ದು, ಇವರ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ.
ಕಿಮ್ಸ್ ಆಸ್ಪತ್ರೆಯಲ್ಲಿರುವ ರೇಖಾ ಕದಿರೇಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವಿಧಿವಿಧಾನ ಮುಕ್ತಾಯವಾಗಿದ್ದು, ಅವರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಪಿ.ಸಿ.ಮೋಹನ್ ಆಸ್ಪತ್ರೆಗೆ ತೆರಳಿ ರೇಖಾ ಕದಿರೇಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.