ರೈಲಿಗೆ ತಲೆಕೊಟ್ಟು ಪೊಲೀಸ್ ಪೇದೆ ಆತ್ಮಹತ್ಯೆ…

143
firstsuddi

ತುಮಕೂರು : ರೈಲಿಗೆ ತಲೆಕೊಟ್ಟು ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಯಲ್ಲಾಲಿಂಗ ಮೇಟಿ(25) ಆತ್ಮಹತ್ಯೆ ಮಾಡಿಕೊಂಡ ಪೇದೆ ಎಂದು ಗುರುತಿಸಲಾಗಿದೆ. ವಿಜಯಪುರ ಮೂಲದ ಯಲ್ಲಾಲಿಂಗ ಮೇಟಿ ಅವರು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯಲ್ಲಾಲಿಂಗ ಅವರ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.