ರೈಲಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ?

40
firstsuddi

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ರೀತಿಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ದಂಪತಿ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ದೇಹಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಮೃತ ವ್ಯಕ್ತಿಯ ಶರ್ಟ್ ಮೇಲೆ ವಿನಾಯಕ ಟೈಲರ್-ಗೌರಿಬಿದನೂರು ವಿಳಾಸದ ಸ್ಟಿಕರ್ ಇದೆ. ಮೃತದೇಹಗಳ ಬಗ್ಗೆ ಹೆಚ್ಚು ವಿವರ ದೊರೆತಿಲ್ಲ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ ಪೊಲೀಸರು ಹಾಗೂ ರೈಲ್ವೆ ಇಲಾಖೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.