ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ನಲ್ಲಿ ಬೆಂಕಿ, ಪ್ರಾಣಾಪಾಯದಿಂದ ಪಾರು…

209
firstsuddi

ಬೆಂಗಳೂರು : ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋಗಿರುವ ಘಟನೆ ಜಿಲ್ಲೆಯ ಆನೇಕಲ್ ಬಳಿ ನಡೆದಿದೆ. ಹೊಗನೇಕಲ್‍ನ ಅಡುವೈ ಕುರುಚಿ ಗ್ರಾಮದಲ್ಲಿ ಬೆಳಿಗ್ಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಆಂಬುಲೆನ್ಸ್‍ನಲ್ಲಿದ್ದ ಚಾಲಕ, ವೈದ್ಯಕೀಯ ಸಿಬ್ಬಂದಿ, ರೋಗಿ ಹಾಗೂ ಅವರ ಸಂಬಂಧಿ ಸಣ್ಣ ಪುಟ್ಟ ಗಾಯಗೊಂಡಿದ್ದು ಅಪಘಾತದಿಂದ ಪಾರಾಗಿದ್ದಾರೆ. ರೋಗಿಯನ್ನು ಬೇರೆ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.