ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ಬಹುನಿರೀಕ್ಷಿತ ಬಘೀರ ಸಿನಿಮಾ ಬಿಡುಗಡೆ.

30

ಬೆಂಗಳೂರು: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಶ್ರೀ ಮುರಳಿ ಅಭಿನಯದ ‘ಬಘೀರ’ ಚಿತ್ರ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಸ್ಯಾಂಡಲ್‍ವುಡ್‍ನ ಸೂಪರ್ ಸ್ಟಾರ್‌ಗಳಾದ ಶ್ರೀಮುರಳಿ ಮತ್ತು ರುಕ್ಮಿಣಿ ವಸಂತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಕಾತರರಾಗಿದ್ದರು. ಬಘೀರ ಚಿತ್ರ ಇಂದು 250ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದೆ. ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಬಘೀರ ಅದ್ಧೂರಿಯಾಗಿ ಬಿಡುಗಡೆ ಆಗಿದ್ದು, ನಾಯಕ ನಟ ಶ್ರೀ ಮರುಳಿ ಸಂತೋಷ್ ಥಿಯೇಟರ್‌ಗೆ ಭೇಟಿ ಕೊಟ್ಟಿದ್ದಾರೆ.
ಬಘೀರ ಚಿತ್ರಕ್ಕೆ ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಶ್ರೀಮುರಳಿ ಮತ್ತು ರುಕ್ಮಿಣಿ ವಸಂತ್ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಡಾ.ಸೂರಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾಗೆ ನಿರ್ದೇಶನದ ಜೊತೆಗೆ ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಪೂರೈಸಿದ್ದಾರೆ. ಎ.ಜೆ ಶೆಟ್ಟಿ ಅವರ ಕ್ಯಾಮರಾ ಕೈಚಳಕವಿದೆ. ಚೇತನ್ ಡಿಸೋಜಾ ಆ್ಯಕ್ಷನ್ ಕಂಪೋಸ್ ಮಾಡಿದ್ದಾರೆ. ಸೆನ್ಸಾರ್ ಪರೀಕ್ಷೆಯಲ್ಲಿ ಯು/ಎ ಪ್ರಮಾಣಪತ್ರ ಪಡೆದುಕೊಂಡಿರುವ ಈ ಚಿತ್ರ ಇಂದು ಬಿಡುಗಡೆ ಆಗಿದ್ದು, ಕಲೆಕ್ಷನ್ ಮೇಲೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಕಲೆಕ್ಷನ್ ಅಂಕಿ ಅಂಶ ಸಿನಿಮಾದ ಯಶಸ್ಸನ್ನು ನಿರ್ಧರಿಸಲಿದೆ.