ರೋಸ್ ಸಮಾರಂಭಕ್ಕೆ ಬಂದಿದ್ದ ಯುವತಿ ಕುಸಿದು ಬಿದ್ದು ಸಾವು…

74
firstsuddi

ಉಡುಪಿ : ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ.

ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮಕ್ಕೆ ಬಂದಿದ್ದರು. ರೋಸ್ ಸಮಾರಂಭದಲ್ಲಿ ಡ್ಯಾನ್ಸ್ ಮಾಡಕೊಂಡು ಬರುತ್ತಿದ್ದಾಗ ಹಠಾತ್ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.