ರೋಹಿಣಿ ಸಿಂಧೂರಿಯವರ ಕೋವಿಡ್ ಟಫ್ ರೂಲ್ಸ್ ಜಾರಿಗೆ ಬ್ರೇಕ್ ಹಾಕಿದ ಸರ್ಕಾರ…

138
firstsuddi

ಮೈಸೂರು : ಇತ್ತೀಚಿಗೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯಲ್ಲಿ ಅಗತ್ಯಬಿದ್ದರೆ ಜಿಲ್ಲಾಡಳಿತಗಳು ಟಫ್ ರೂಲ್ಸ್ ಜಾರಿ ಮಾಡಬಹುದು ಎಂದಿತ್ತು. ಅದರಂತೆ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ 10 ದಿನಗಳ ಮಟ್ಟಿಗೆ ಟಫ್ ರೂಲ್ಸ್ ಪ್ರಕಟಿಸಿದ್ರು. ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆ ಡಿಸಿ ರೋಹಿಣಿ ಸಿಂಧೂರಿ ಅವರು ಹಲವು ಬಿಗಿ ಕ್ರಮ ಕೈಗೊಂಡಿದ್ದರು. ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರು ಕೊರೊನಾ ನೆಗೆಟೀವ್ ರಿಪೋರ್ಟನ್ನು ಕಡ್ಡಾಯವಾಗಿ ತರಬೇಕು ಎಂದು ಆದೇಶ ಹೊರಡಿಸಿದ್ದರು. ಆದರೆ ಈ ಕಠಿಣ ನಿಯಮಕ್ಕೆ ಸರ್ಕಾರ ಕೊಕ್ಕೆ ಹಾಕಿದೆ. ಕೋವಿಡ್ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಏನಾದರೂ ಪ್ರತಿಷ್ಠೆಗೆ ಬಿದ್ದಿದ್ಯಾ? ಎಂಬ ಅನುಮಾನದ ಪ್ರಶ್ನೆ ಎದ್ದಿದೆ.

ಜಿಲ್ಲೆಗಳು ಪ್ರತ್ಯೇಕವಾಗಿ ಮಾರ್ಗಸೂಚಿ ಹೊರಡಿಸುವಂತಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ಸೂಚನೆಯನ್ನು ಮಾತ್ರ ಕಟ್ಟುನಿಟ್ಟಾಗಿ ಪಾಲಿಸಬೇಕು. ಲಾಕ್ ಡೌನ್ ಅಥವಾ ಕಠಿಣ ಕ್ರಮ ಆದೇಶ ಹೊರಡಿಸುವ ಅಧಿಕಾರ ಸಿಎಂ ಯಡಿಯೂರಪ್ಪ ಅವರಿಗೆ ಮಾತ್ರವಿದೆ. ಕೂಡಲೇ ಆದೇಶ ಹಿಂಪಡೆಯಬೇಕು ಎಂದು ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರು ಸುತ್ತೋಲೆ ಹೊರಡಿಸಿದ್ದಾರೆ.