ಅಹಮದಾಬಾದ್: ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಶತಕ ಸಿಡಿಸಿದ ಆಸ್ಟ್ರೇಲಿಯಾ ಕ್ರಿಕೆಟಿಗ ಟ್ರಾವಿಸ್ ಹೆಡ್, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ವಿಶ್ವದ ಅತ್ಯಂತ ನತದೃಷ್ಟ ವ್ಯಕ್ತಿ ಎಂದು ಕರೆದಿದ್ದಾರೆ.
ಟೀಂ ಇಂಡಿಯಾ ವಿರುದ್ಧ 241 ರನ್‌ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 95 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿದರು. ಪಂದ್ಯದ ಬಳಿಕ ಪೋಸ್ಟ್ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಟ್ರಾವಿಸ್ ಹೆಡ್, ರೋಹಿತ್ ಶರ್ಮಾರನ್ನು ವಿಶ್ವದ ಅತ್ಯಂತ ನತದೃಷ್ಟ ವ್ಯಕ್ತಿ ಎಂದು ಕರೆದಿದ್ದಾರೆ.
ಇದೊಂದು ಅನಿರೀಕ್ಷಿತ ದಿನವಾಗಿದೆ, ನಾವ್ಯಾರೂ ಕೂಡ ಕಪ್ ಗೆಲ್ಲುತ್ತೇವೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ನಿಜಕ್ಕೂ ಇದೊಂದು ಅಸಾಧಾರಣ ದಿನವಾಗಿದೆ. ನಾನು ಎದುರಿಸಿದ ಮೊದಲ 20 ಎಸೆತಗಳು ನನ್ನಲ್ಲಿ ಆತ್ಮವಿಶ್ವಾಸ ಮೂಡಿಸಿತ್ತು. ಅದನ್ನು ಪಂದ್ಯದ ಕೊನೆಯವರೆಗೂ ತೆಗೆದುಕೊಂಡು ಹೋಗಿದ್ದೇನೆ ಅಷ್ಟೇ ಎಂದು ಟ್ರಾವಿಸ್ ಹೆಡ್ ಹೇಳಿಕೊಂಡಿದ್ದಾರೆ.
ಇದೇ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕುರಿತು ತಮ್ಮ ಅಭಿಪ್ರಾಯ ಕೇಳಿದಾಗ, ಅವರು ವಿಶ್ವದ ಅತ್ಯಂತ ನತದೃಷ್ಟ ವ್ಯಕ್ತಿ ಎಂದು ಹೇಳಿದ್ದಾರೆ.










