ಮಂಗಳೂರು : ವಿದ್ಯಾರ್ಥಿಯೋರ್ವನ ರ‍್ಯಾಗಿಂಗ್ ಮತ್ತು ಕಾಲೇಜು ಉಪನ್ಯಾಸಕರಿಗೆ ಹಲ್ಲೆಗೈದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮುಕ್ಕದ ಕಾಲೇಜಿನ ವಿದ್ಯಾರ್ಥಿಗಳಾದ ಮಹಮ್ಮದ್ ಬಾಝಿಲ್, ಕೆ ಯು ಶಮೀಲ್, ಸಂಭ್ರಮ್ ಆಳ್ವಾ ಮತ್ತು ಅಶ್ವಿನ್ ಜಾನ್ಸನ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಪ್ರಾಥಮಿಕ ವರ್ಷದಲ್ಲಿ ಇಂಜೀನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ರ‍್ಯಾಗಿಂಗ್ ನಡೆಸಿದ್ದು ಈ ಬಗ್ಗೆ ನೊಂದ ವಿದ್ಯಾರ್ಥಿ ನೀಡಿದ್ದ ದೂರಿನಂತೆ ಕಾಲೇಜಿನ ಡೀನ್ ಆರೋಪಿತ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದರು.
ಈ ಮಧ್ಯೆ ಆರೋಪಿತ ವಿದ್ಯಾರ್ಥಿಗಳು ಕಾಲೇಜಿನ ಉಪನ್ಯಾಸಕರೊಬ್ಬರಿಗೆ ಅವಹೇಳಿಸಿ ಹಲ್ಲೆಗೈದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿ ಮತ್ತು ಉಪನ್ಯಾಸಕ ನೀಡಿದ ಎರಡು ಪ್ರತ್ಯೇಕ ದೂರನ್ನು ದಾಖಲಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.










