ಲಖಿಂಪುರ ಖೇರಿ ಹಿಂಸಾಚಾರ ; ಆಶಿಶ್ ಮಿಶ್ರಾ ಸೇರಿ ಇತರ 13 ಮಂದಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ…

70
firstsuddi

ಲಖನೌ : ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿ ಇತರ 13 ಮಂದಿ ವಿರುದ್ಧ ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡ ಇಂದು 5,000 ಪುಟಗಳ ಚಾರ್ಜ್‍ಶೀಟ್ ಅನ್ನು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಚಾರ್ಜ್‍ಶೀಟ್ ನಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 201ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ತಿಳಿಸಿದ್ದಾರೆ.

ಆಶಿಶ್ ಮಿಶ್ರಾ, ವೀರೇಂದ್ರ ಶುಕ್ಲಾ, ಅಂಕಿತ್ ದಾಸ್,ನಂದನ್ ದಾಸ್ ಭಿಷ್ಟ್, ಸತ್ಯಂ ತ್ರಿಪಾಠಿ ಅಲಿಯಾಸ್ ಸತ್ಯ ಪ್ರಕಾಶ್ ತ್ರಿಪಾಠಿ, ಲತೀಫ್ ಅಲಿಯಾಸ್ ಕಲ್ಲೆ, ಶೇಖರ್ ಭಾರತಿ, ಸುಮಿತ್ ಜೈಸ್ವಾಲ್, ಆಶಿಶ್ ಪಾಂಡೆ, ಲವ್ ಕುಶ್, ಶಿಶುಪಾಲ್, ಉಲ್ಲಾಸ್ ಕುಮಾರ್ ತ್ರಿವೇದಿ ಅಲಿಯಾಸ್, ಮೋಹಿತ್ ತ್ರಿವೇದಿ, ರಿಂಕು ರಾಣಾ ಮತ್ತು ಧರ್ಮೇಂದ್ರ ಕುಮಾರ್ ಬಂಜಾರ ಆರೋಪಿಗಳಾಗಿದ್ದಾರೆ. ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯು ಹೈಕೋರ್ಟ್ ನಲ್ಲಿದ್ದು, ಇತರರ ಜಾಮೀನು ಅರ್ಜಿಯು ಲಖಿಂಪುರ ಖೇರಿ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಸದ್ಯ ಆರೋಪಿಗಳು ಪ್ರಸ್ತುತ ಲಖೀಂಪುರ ಖೇರಿ ಜೈಲಿನಲ್ಲಿ ಇದ್ದಾರೆ.

ಇತ್ತೀಚೆಗೆ ಎಸ್ಐಟಿ ಸ್ಥಳೀಯ ನ್ಯಾಯಾಲಯದಲ್ಲಿ ಅಕ್ಟೋಬರ್ 3 ರಂದು ನಾಲ್ವರು ರೈತರು ಸೇರಿ ಒಟ್ಟು 8 ಮಂದಿಯ ಹತ್ಯೆಯನ್ನು ಯೋಜಿತ ಪಿತೂರಿ ಎಂದು ವರದಿಯನ್ನು ಸಲ್ಲಿಸಿತ್ತು.