ಲವ್ ಜಿಹಾದ್ ಆರೋಪ: ಹಿಂದೂ ಬಾಲಕಿ ಜೊತೆ ಅನ್ಯಧರ್ಮಿಯ ಯುವಕ ಪರಾರಿ…

60
firstsuddi

ಮಂಡ್ಯ: ಅಪ್ರಾಪ್ತ ಹಿಂದೂ ಬಾಲಕಿಯೊಂದಿಗೆ ಅನ್ಯಧರ್ಮೀಯ ಯುವಕನೋರ್ವ ಪರಾರಿಯಾಗಿರುವಂತಹ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ.

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ. 19 ವರ್ಷದ ಯುವಕ ಸೈಯದ್ ತಬ್ರೀಜ್ ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್ ಜಿಹಾದ್ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕ ಸೈಯದ್ ತಬ್ರೀಜ್ ಮತ್ತು ಬಾಲಕಿ ಜನವರಿ 12 ರಂದು ಓಡಿ ಹೋಗಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು ಕೆ.ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಬಳಿಕ ಪಟ್ಟಣ ಪೊಲೀಸರು ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆತಂದಿದ್ದಾರೆ. ಬಾಲಕಿ ಕರೆದೊಯ್ದು ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಬಳಿಕ ಹಿಂದೂ ಸಂಘಟನೆಗಳಿಂದ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿದೆ.