‘ಲವ್ ಯು ರಚ್ಚು’ ಸಿನಿಮಾ ಚಿತ್ರೀಕರಣದ ವೇಳೆ ಅವಘಡ – ಶಾರ್ಟ್ ಸರ್ಕ್ಯೂಟ್ ನಿಂದ ಫೈಟರ್ ಸಾವು…

81
firstsuddi

ಬೆಂಗಳೂರು : ಲವ್ ಯು ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಫೈಟರ್ ಸಾವನ್ನಪ್ಪಿದ್ದಾರೆ. ತಮಿಳುನಾಡು ಮೂಲದ ಫೈಟರ್ ವಿವೇಕ್ ಮೃತ ವ್ಯಕ್ತಿ.

ಅಜಯ್ ರಾವ್ ಮತ್ತು ರಚಿತಾ ರಾಮ್ ನಟನೆಯ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಗುರು ದೇಶಪಾಂಡೆ ನಿರ್ಮಾಣದ ಸಿನಿಮಾ ಇದಾಗಿದ್ದು, ವಿನೋದ್ ಸಾಹಸ ನಿರ್ದೇಶನದಲ್ಲಿ ನಡೆಯುತ್ತಿರುವ ಸಾಹಸ ದೃಶ್ಯದ ವೇಳೆ ದುರಂತ ಸಂಭವಿಸಿದೆ.
ರೋಪ್ ಎಳೆಯುವ ವೇಳೆ ಹೈ ಟೆನ್ಶನ್ ವೈರ್ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.