ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ : ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ…

57
firstsuddi

ನವದೆಹಲಿ : ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸುವುದರ ವಿರುದ್ಧದ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಲಸಿಕೆ ನೀತಿಯನ್ನು ಅಸಮಂಜಸವೆಂದು ಹೇಳಲಾಗುವುದಿಲ್ಲ ಎಂದು ಹೇಳಿದ ಸರ್ವೋಚ್ಛ ನ್ಯಾಯಾಲಯ ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು ಎಂದು ಹೇಳಿದೆ.

ಕೋವಿಡ್-19 ಲಸಿಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ದತ್ತಾಂಶವನ್ನು ಸಾರ್ವಜನಿಕಗೊಳಿಸಬೇಕು. ಸಾರ್ವಜನಿಕ ಸ್ಥಳಗಳಿಗೆ ಲಸಿಕೆ ಹಾಕದ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸುವ ಕೆಲವು ರಾಜ್ಯ ಸರ್ಕಾರಗಳು, ಸಂಸ್ಥೆಗಳು ವಿಧಿಸಿರುವ ಷರತ್ತುಗಳು ಪ್ರಮಾಣಾನುಗುಣವಾಗಿಲ್ಲ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ಪರಿಸ್ಥಿತಿಗಳಲ್ಲಿ ನಿರ್ಬಂಧ ಹಿಂಪಡೆಯಬೇಕು. ಯಾವುದೇ ವ್ಯಕ್ತಿಗೆ ಬಲವಂತವಾಗಿ ಲಸಿಕೆ ಹಾಕಿಸಲು ಸಾಧ್ಯವಿಲ್ಲ. ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯಕೂಡ ಮಾಡಬಾರದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.