ಲಾಕ್‍ಡೌನ್ ಆದೇಶವನ್ನು ಪಾಲಿಸದೆ ಅನಗತ್ಯವಾಗಿ ಓಡಾಡುವವರನ್ನು ಅರೆಸ್ಟ್ ಮಾಡಿ-ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ…

194
firstsuddi

ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಇಡೀ ಭಾರತವೇ ಲಾಕ್‍ಡೌನ್ ಆಗಿದ್ದರೂ, ಆದೇಶವನ್ನು ಪಾಲಿಸದೆ ರಸ್ತೆಯಲ್ಲಿ ಅನಗತ್ಯವಾಗಿ ತಿರುಗಾಡುತ್ತಿರುವವರನ್ನು ಅರೆಸ್ಟ್ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾಗಳಿಗೆ ಕೆಲವೊಂದು ಸೂಚನೆಯನ್ನು ನೀಡಿದ್ದಾರೆ.
• ಕೇಂದ್ರ ಸರ್ಕಾರ ಈಗಾಗಲೇ ಹೊರಡಿಸಿರುವ ಲಾಕ್‍ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
• ಆದೇಶವನ್ನು ಪಾಲಿಸದೆ ಅನಗತ್ಯವಾಗಿ ರಸ್ತೆಯಲ್ಲಿ ತಿರುಗುವವರನ್ನು ಅರೆಸ್ಟ್ ಮಾಡಿ.
• ರಾಜ್ಯದ ಎಲ್ಲಾ ಜಿಲ್ಲೆಗಳ ಗಡಿಗಳನ್ನು ಸಂಪೂರ್ಣವಾಗಿ ಸೀಲ್ ಮಾಡಬೇಕು.
• ಪ್ರತಿ ಜಿಲ್ಲೆಯಲ್ಲಿ 50 ಬೆಡ್ ಕೊರೊನಾಗೆ ಮೀಸಲಿಡಬೇಕು.
• ಕಾಸರಗೋಡಿನಿಂದ ಬಂದವರ ಮೇಲೆ ತೀವ್ರ ನಿಗಾವಹಿಸಬೇಕು.
• ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳಬೇಕು.
• ವೈದ್ಯರು ಹಾಗೂ ನರ್ಸ್‍ಗಳಿಗೆ ತೊಂದರೆ ಕೊಡುವ ಮನೆ ಮಾಲೀಕರಿಗೆ ಎಚ್ಚರಿಕೆಯನ್ನು ನೀಡಬೇಕು.
• ಕ್ಲಿನಿಕ್ ಬಂದ್ ಮಾಡುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ.