ಬೆಂಗಳೂರು : ಕೊರೊನಾ ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆ ಶೇ.10 ರಷ್ಟು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ 18 ರಿಂದ 44 ವಯಸ್ಸಿನವರಿಗೆ 3 ದಿನಗಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಲಾಕ್ ಡೌನ್ ಆದ ಮೇಲೆ ಏಪ್ರಿಲ್ 1 ರಿಂದ ಜೂನ್ 15 ರವರೆಗೆ ಅಬಕಾರಿ ಇಲಾಖೆಗೆ 4,500 ಕೋಟಿ ರೂ. ವರಮಾನ ಬಂದಿದೆ. ಸಾಮಾನ್ಯ ದಿನಗಳಿಗಿಂತ ಶೇ.10 ರಷ್ಟು ಹೆಚ್ಚು ಲಾಭ ಬಂದಂತಾಗಿದೆ ಎಂದು ಮಾಹಿತಿ ನೀಡಿದರು.
ಇಂದು ವಿಶ್ವ ಯೋಗ ದಿನ, ಯೋಗ ಮಾಡುವುದರಿಂದ ಕೊರೊನಾದಂತಹ ಮಾರಕ ರೋಗಗಳನ್ನು ದೂರ ಇಡಬಹುದು ಎಂದು ಅಭಿಪ್ರಾಯಪಟ್ಟರು.










