ಲಾರಿಗಳ ನಡುವೆ ಡಿಕ್ಕಿ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್…

58
firstsuddi

ನೆಲಮಂಗಲ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೇ ನಿಂತಲ್ಲೆ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಯೂಟರ್ನ್ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಏಷ್ಯನ್ ಪೇಂಟ್ಸ್ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪೇಂಟ್ಸ್ ತುಂಬಿದ ಲಾರಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ 3 ರಿಂದ 4 ಕಿ.ಮೀ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ಸಂಚಾರಿ ಪೊಲೀಸರು, ಟ್ರಾಫಿಕ್ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.