ಚಿಕ್ಕಬಳ್ಳಾಪುರ : ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ. ಆಂಧ್ರಪ್ರದೇಶದಿಂದ ಲೋಹದ ಶೀಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಹಾಗೂ ತಮಿಳುನಾಡಿನಿಂದ ಆಲೂಗಡ್ಡೆ ತುಂಬಿಕೊಂಡು ಆಂಧ್ರ ಪ್ರದೇಶದತ್ತ ತೆರಳುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










