ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ- ರೋಗಿ ಸ್ಥಳದಲ್ಲೇ ಸಾವು…

39
firstsuddi

ಬೆಂಗಳೂರು: ಚಿತ್ರದುರ್ಗ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್, ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಆತನನ್ನು ಚಿಕಿತ್ಸೆಗಾಗಿ ಕರೆತರುವಾಗ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿದೆ. ಪರಿಣಾಮ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಕರದೊಯ್ಯುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ಆ್ಯಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.