ಲಾರಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ – ಸ್ಥಳದಲ್ಲೇ ದಂಪತಿ ಸಾವು, 20 ಮಂದಿಗೆ ಗಾಯ…

69
firstsuddi

ಬೆಂಗಳೂರು ಗ್ರಾಮಾಂತರ : ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬಸ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆಯ ಮೈಲಾಪುರ ಗೇಟ್ ಬಳಿ ನಡೆದಿದೆ.

ಚಿತ್ತೂರು ಮೂಲದ ಬಾಲಮುರುಗನ್(45) ಹಾಗೂ ಸೆಲ್ವಿ (36) ಮೃತರು. ಅಪಘಾತದಲ್ಲಿ 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಆಂಧ್ರ ಪ್ರದೇಶದ ಬಲಿಜಖಂಡ್ರಿಗದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ ಹೊಸಕೋಟೆ ಸಮೀಪದ ಮೈಲಾಪುರ ಗೇಟ್ ಬಳಿ ಕಲ್ಲು ತುಂಬಿದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಬಸ್ ಚಾಲಕನ ಅತಿ ವೇಗ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತು ಹೊಸಕೋಟೆ ಠಾಣೆ ಇನ್ಸ್​​ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.