ಲಾರಿ-ಕಾರು ಡಿಕ್ಕಿ ; ಸಿವಿಲ್ ಇಂಜಿನಿಯರ್ ಸ್ಥಳದಲ್ಲೇ ಸಾವು…

126
firstsuddi

ಬೀದರ್ : ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಮೃತರನ್ನು ಅಮರ್ ಬೀರದಾರ್ (35) ಎಂದು ಗುರುತಿಸಲಾಗಿದೆ. ಜಿಲ್ಲೆಯ ಬಾಲ್ಕಿ ತಾಲ್ಲೂಕು ಡೊಂಗರಗಿ ಗ್ರಾಮದವರಾದ ಅಮರ್ ಬೀರದಾರ್ ಅವರು ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರ್ ಅಗಿದ್ದರು. ಮೃತ ಅಮರ್ ಬೀರದಾರ್ ಒಂದುವರೆ ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಈ ಘಟನೆ ಸಂಭವಿಸಿದ್ದು, ಬೆಂಗಳೂರಿನಿಂದ ತನ್ನ ಸ್ವಗ್ರಾಮ ಡೊಂಗರಗಿಗೆ ತೆರಳುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು,ಅಮರ್ ಬೀರಾದರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೂಡ್ಲಿಗಿ ಸಿಪಿಐ ವಸಂತ ಅಸೋದೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆ ಸಂಬಂಧ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.