ಲಾರಿ – ಕ್ಯಾಂಟರ್ ಡಿಕ್ಕಿ : ಸ್ಥಳದಲ್ಲೇ ಕ್ಯಾಂಟರ್ ಚಾಲಕ ಸಾವು…

111
Firstsuddi

ವಿಜಯಪುರ : ಲಾರಿ ಹಾಗೂ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಕ್ಯಾಂಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ಭಾಗದ ಎನ್ಎಚ್ 218ರಲ್ಲಿ ಸಂಭವಿಸಿದೆ.

ಮೃತ ವಿಕಾಸ್ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಬಾರ್ಸಿ ತಾಲ್ಲೂಕಿನ ಪಾನಗಾವ್ ನಿವಾಸಿ ಎಂದು ತಿಳಿದು ಬಂದಿದೆ. ಲಾರಿ ಚಾಲಕ ಹಾಗೂ ಕ್ಲಿನರ್ ಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಕೊಲ್ಹಾರ ಸರ್ಕಾರಿ ಆಸ್ಪತ್ತೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.