ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು…

56
firstsuddi

ಚಾಮರಾಜನಗರ : ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ವಲಯದ ಬಳಿ ನಿನ್ನೆ ರಾತ್ರಿ ನಡೆದಿದೆ.

ಬಂಡೀಪುರ ಅಭಯಾರಣ್ಯದಲ್ಲಿ ಭಾರಿ ವಾಹನಗಳಿಗೆ ರಾತ್ರಿ ಸಂಚಾರ ನಿಷೇಧಿಸಲಾಗಿದೆ. ನಿಯಮ ಮೀರಿ ಸಂರಕ್ಷಿತಾರಣ್ಯದಲ್ಲಿ ವೇಗವಾಗಿ ಬಂದ ಲಾರಿ ರಸ್ತೆಯ ಮಧ್ಯದಲ್ಲಿ ಇದ್ದ ಆನೆಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಿಂದ ರಸ್ತೆಯಲ್ಲೇ ಆನೆ ಮೃತಪಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕನನ್ನು ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.