ತುಮಕೂರು : ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.
ಮೃತರನ್ನು ಬೈಕ್ ಸವಾರ ರಾಮಚಂದ್ರ (30) ಹಾಗೂ ಪ್ರಿಯಾ (25) ಎಂದು ಗುರುತಿಸಲಾಗಿದೆ. ಸಾಗರನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಘಟನೆ ಸಂಭವಿಸಿದ್ದು, ಅಪಘಾತದಿಂದ ಬೈಕ್ ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ. ಈ ವೇಳೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮಹಿಳೆ ಪ್ರಿಯಾ ಅವರನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಮಗಳೂರಿನ ಕಡೂರು ತಾಲ್ಲೂಕು ಬೀರೂರಿನವರಾಗಿದ್ದು ಬೆಂಗಳೂರು ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










