ಧಾರವಾಡ : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್‍ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನವಲಗುಂದ ತಾಲ್ಲೂಕಿನ ಅಳಗವಾಡಿ ಬಳಿ ನಡೆದಿದೆ. ಮಹಾಂತೇಶ(26), ರಾಯನಗೌಡ(28) ಹಾಗೂ ಆನಂದ(26) ಮೃತ ದುರ್ದೈಗಳು ಎನ್ನಲಾಗಿದ್ದು, ಮೂವರು ಯುವಕರು ಬೈಕ್‍ನಲ್ಲಿ ನವಲಗುಂದ ಕಡೆಯಿಂದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










