ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ-ಮೂವರು ಸ್ಥಳದಲ್ಲೇ ಸಾವು…

132
firstsuddi

ಚಿಕ್ಕಬಳ್ಳಾಪುರ : ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೊಡ್ಡಪ್ಯಾಯಲಗುರ್ಕಿ ಸಮೀಪ ನಡೆದಿದೆ. ಮೃತರು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ತಮ್ಮ ಸ್ವಿಫ್ಟ್ ಕಾರಿನಲ್ಲಿ ಹೈದರಾಬಾದ್‍ಗೆ ಹಿಂದಿರುಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಯುವಕರು ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.