ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನ ಆಕಾಶ್(20), ಹೇಮಂತ್(28) ಹಾಗೂ ಶಿವಕುಮಾರ್ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಉಜ್ವಲ್ ಕೃಷ್ಣ ಗಾಯಗೊಂಡಿದ್ದು, ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಕಾರು ಬೆಂಗಳೂರಿನಿಂದ ಪಾವಗಡ ಕಡೆ, ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎನ್ನಲಾಗಿದೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










